ಸುದ್ದಿ ಸಂಕ್ಷಿಪ್ತ

ಡಿ.23ಕ್ಕೆ ರೈತ ದಿನಾಚರಣೆ

ಸೋಮವಾರಪೇಟೆ,ಡಿ.22-ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಗೌಡಳ್ಳಿ ಬಿ.ಜಿ.ಎಸ್.ಆಂಗ್ಲ ಮಾಧ್ಯಮ ಶಾಲೆ ಹಾಗೂ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರ ಆಶ್ರಯದಲ್ಲಿ ಎರಡನೆ ವರ್ಷದ ರೈತ ದಿನಾಚರಣೆ ಕಾರ್ಯಕ್ರಮ ಡಿ.23ರಂದು ಗೌಡಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿ ವಿ.ಎನ್.ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ.ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು, ಕಾರ್ಯದರ್ಶಿ ಶಂಭುನಾಥ ಮಹಾಸ್ವಾಮೀಜಿ, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಬಿ.ಭರತ್ ಕುಮಾರ್, ವಿಧಾನಪರಿಷತ್ ಸದಸ್ಯ ಸುನೀಲ್ ಸುಬ್ರಹ್ಮಣಿ, ಜಿಪಂ ಸದಸ್ಯ ಬಿ.ಜೆ.ದೀಪಕ್, ತಾಪಂ ಸದಸ್ಯೆ ಕುಸುಮ ಅಶ್ವಥ್, ಕೃಷಿ ಸಹಾಯಕ ನಿರ್ದೇಶಕ ಡಾ.ರಾಜಶೇಖರ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮುತ್ತಪ್ಪ ಮತ್ತಿತರರು ಭಾಗವಹಿಸಲಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

Check Also

Close
error: