ಮೈಸೂರು

ಕೊಲಂಬಿಯಾ ಏಷ್ಯಾದಲ್ಲಿ ಐವಿಎಫ್ ಕೇಂದ್ರ ಉದ್ಘಾಟನೆ

ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ಐವಿಎಫ್ ಕೇಂದ್ರವನ್ನು ಜಿಲ್ಲಾಧಿಕಾರಿ ಡಿ.ರಂದೀಪ್  ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಇಂದಿನ ಒತ್ತಡದ ಜೀವನದಿಂದಾಗಿ ಪುರುಷರು ಹಾಗೂ ಮಹಿಳೆಯರಲ್ಲಿ ಬಂಜೆತನ ಕಾಣಿಸುತ್ತಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಯು ಐವಿಎಫ್ ತೆರೆಯುವ ಮೂಲಕ ಸಂತಾನಾಕಾಂಕ್ಷಿಗಳಿಗೆ ಆಶಾಕಿರಣವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಕೊಲಂಬಿಯಾ ಏಷಿಯಾ ಆಸ್ಪತ್ರೆಯ ಜನರಲ್ ಮ್ಯಾನೇಜರ್ ಡಾ.ವಿಜುರಾಜನ್ ಮಾತನಾಡಿ ಮೈಸೂರಿನಲ್ಲಿ ವಿಶ್ವದರ್ಜೆಯ ಈ ಸೌಲಭ್ಯವನ್ನು ಪರಿಚಯಿಸಲು ನಮಗೆ ಹೆಮ್ಮೆ ಎನಿಸುತ್ತದೆ. ಮೈಸೂರಿನ ಜನತೆ ಸಂತಾನೋತ್ಪತ್ತಿಗೆ ಸಂಬಂಧಿಸಿದ ಯಾವುದೇ ವಿಚಾರಕ್ಕೂ ಈಗ ದೂರದ ಬೆಂಗಳೂರಿಗೆ ತೆರಳಬೇಕಾದ ಅಗತ್ಯವಿಲ್ಲ. ಸಂತಾನಾಪೇಕ್ಷಿಗಳಿಗೆ ಗರ್ಭಧಾರಣೆ ಸೌಲಭ್ಯಗಳು ಸಿಗುವಂತೆ ಮಾಡಲು ಎಲ್ಲಾ ರೀತಿಯ ಸೌಲಭ್ಯಗಳನ್ನು ನಾವು ಕಲ್ಪಿಸಲಿದ್ದೇವೆ ಎಂದರು.

ಈ ಸಂದರ್ಭ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಅಭಿಷೇಕ್ ಥಾಮಸ್,  ನಿವೇದಿತಾ, ವೈದ್ಯರು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

comments

Related Articles

error: