ಕರ್ನಾಟಕಪ್ರಮುಖ ಸುದ್ದಿ

ಅತ್ಯಾಚಾರಿಗೆ ಗಲ್ಲು ಶಿಕ್ಷೆ ಕುರಿತ ಮಸೂದೆ ಜಾರಿಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ : ರಾಮಲಿಂಗಾರೆಡ್ಡಿ

ರಾಜ್ಯ(ಬೆಂಗಳೂರು)ಡಿ.23:-  ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನನ್ನು ಮಧ್ಯಪ್ರದೇಶದಲ್ಲಿ ಜಾರಿಗೆ ತರಲಾಗಿದೆ. ಅಲ್ಲಿನ ಮಸೂದೆಯನ್ನು ತರಿಸಿ ರಾಜ್ಯದಲ್ಲಿಯೂ ಈ ಕಾನೂನು ಜಾರಿ ಸಂಬಂಧ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ವಿಜಯಪುರ ದಲಿತ ಬಾಲಕಿ ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲವು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ಅತ್ಯಾಚಾರ ಮಾಡಿದವರಿಗೆ ಗಲ್ಲು ಶಿಕ್ಷೆ ಜಾರಿಗೆ ತರಲಾಗಿದೆ. ಆ ವರದಿಯನ್ನು ತರಿಸಿ ನಮ್ಮ ರಾಜ್ಯದಲ್ಲೂ ಆ ಕಾನೂನು ಜಾರಿಗೆ ತರುವ ಬಗ್ಗೆ ಮುಖ್ಯ ಮಂತ್ರಿಯವರ ಜೊತೆ ಮಾತಾನಾಡುತ್ತೇನೆ ಎಂದು ಹೇಳಿದರು.

ಯಲಹಂಕದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಶೇ.ಐದಕ್ಕಿಳಿದಿದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಶೇ. ಆರರಷ್ಟಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲಾಗಿದ್ದು, ಅವುಗಳ ಶೇಕಡಾ ಐದಕ್ಕೆ ಇಳಿಕೆಯಾಗಿದೆ ಎಂದರು. ಬಿಜೆಪಿ ಒಂದು ನಾಟಕ ಕಂಪನಿ. ಅವರಲ್ಲಿ ಸಾಕಷ್ಟು ಮಂದಿ ನಾಟಕಕಾರರಿದ್ದಾರೆ. ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರ ನಿರ್ದೇಶನದಂತೆ ಇಲ್ಲಿ ನಾಟಕ ನಡೆಯುತ್ತಿದೆ ಎಂದು ಬಿಜೆಪಿಯನ್ನು ಟೀಕಿಸಿದರು. ಮಹದಾಯಿ ವಿಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ರಾಜ್ಯಕ್ಕೆ ಎಷ್ಟು ಬಾರಿ ಪತ್ರ ಬರೆದರೂ ಪ್ರಯೋಜನವಾಗಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಪತ್ರ ಬರೆದರೆ ಮಾರನೇ ದಿನವೇ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿಂದ ಉತ್ತರ ಬರುತ್ತದೆ ಎಂದು ಹೇಳಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: