ಮೈಸೂರು

ರಾಜ್ಯಮಟ್ಟದ ಕಲಿಕೋತ್ಸವ ನ.26ರಂದು

ಸಾರ್ವಜನಿಕ ಶಿಕ್ಷಣ ಇಲಾಖೆ ಇದೇ ಮೊದಲ ಬಾರಿಗೆ ಮೈಸೂರು ಜಿಲ್ಲೆಯಲ್ಲಿ ನ.26 ರಂದು ಜಯಲಕ್ಷ್ಮಿಪುರದ ಸೇಂಟ್ ಜೋಸೆಫ್ ಶಾಲಾ ಆವರಣದಲ್ಲಿ ‘ರಾಜ್ಯಮಟ್ಟದ ಶೈಕ್ಷಣಿಕ, ವೃತ್ತಿಶಿಕ್ಷಣ ಕಲಿಕೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ತೋಟಗಾರಿಕೆ. ಕೃಷಿ, ಹೊಲಿಗೆ, ಮರಗೆಲಸ, ರೇಷ್ಮೆ ಕೃಷಿ, ಸಾಮಾಜಿಕ ಉಪಯುಕ್ತ ಉತ್ಪಾದನಾ ಕಾರ್ಯ ವಿಷಯದಡಿ 34 ಶೈಕ್ಷಣಿಕ ಬ್ಲಾಕ್ ನಲ್ಲಿ ಆಯೋಜಿಸಿದ್ದ ಕಲಿಕೋತ್ಸವ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನ ಗಳಿಸಿದ ವಿದ್ಯಾರ್ಥಿಗಳು ನ.26 ರಂದು ನಡೆಯುವ ರಾಜ್ಯಮಟ್ಟದ ಕಲಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನ.25 ರಂದು ಬರಲಿದ್ದಾರೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವಾಸ್ತವ್ಯಕ್ಕೆ ನಂಜರಾಜ ಬಹದ್ದೂರ್ ಛತ್ರದಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ವಿದ್ಯಾರ್ಥಿಗಳೊಂದಿಗೆ ಆಗಮಿಸುವ ಶಿಕ್ಷಕರು ವಾಸ್ತವ್ಯದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಉಳಿದುಕೊಂಡು ಸುರಕ್ಷತೆ ಬಗ್ಗೆ ಗಮನ ಹರಿಸಲು ಶಿಕ್ಷಕರಿಗೆ ಸೂಚನೆ ನೀಡುವಂತೆ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಆರ್.ಬಸಪ್ಪ ಭಾಗವಹಿಸಿದ್ದರು.

Leave a Reply

comments

Related Articles

error: