ಕರ್ನಾಟಕಮೈಸೂರು

ಹಾಲು ಉತ್ಪಾದಕರಿಗೆ 1 ರು. ಪ್ರೋತ್ಸಾಹಧನ ಹೆಚ್ಚಳ

ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಒಂದು ರುಪಾಯಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಘೋಷಿಸಿದ್ದಾರೆ.

ರಾಮನಗರದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮದು ರೈತ ಪರ ಸರಕಾರ. ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ಪ್ರಸ್ತುತ ಲೀಟರ್‍ ಹಾಲಿಗೆ ನಾಲ್ಕು ರುಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದರೂ ಇನ್ನು ಎರಡು ರುಪಾಯಿ ಪ್ರೋತ್ಸಾಹ ಧನ ನೀಡಬೇಕು ಎಂಬ ಬೇಡಿಕೆಗೆ ಸರಕಾರ ಸ್ಪಂದಿಸಿದ್ದು, ಮತ್ತೆ ಒಂದು ರುಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.

ಈ ಸಹಾಯಧನ ಹೆಚ್ಚಳದಿಂದ ನಿತ್ಯ 3.50 ಕೋಟಿ ರು. ರೈತರ ಬ್ಯಾಂಕ್ ಖಾತೆಗಳಿಗೆ ತಲುಪುತ್ತದೆ. ಹಾಲು ಉತ್ಪಾದಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ 14 ಜಿಲ್ಲಾ ಹಾಲು ಒಕ್ಕೂಟಗಳಿವೆ. ಹಾಲು ಸಂಗ್ರಹಿಸುವ ಮತ್ತು ಮಾರಾಟ ಮಾಡುವ ಅಧಿಕಾರ ರೈತರಿಗೆ ಇರಬೇಕು ಎಂದು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಪ್ರತಿದಿನ 70-72 ಲಕ್ಷ ಲೀ. ಹಾಲು ಉತ್ಪಾದನೆ ಆಗುತ್ತಿದ್ದು, ಕರ್ನಾಟಕ ದೇಶದಲ್ಲೇ ಎರಡನೇಯ ಸ್ಥಾನದಲ್ಲಿದೆ ಎಂದು ತಿಳಿಸಿದರು.

Leave a Reply

comments

Related Articles

error: