ಮೈಸೂರು

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ

ಮೈಸೂರು,ಡಿ.25-ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ನರಸಿಂಹರಾಜ ಕ್ಷೇತ್ರ, ಶ್ರೀ ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಬಾಲ್ ಫಾರ್ಮ ಹಾಗೂ ಆಡಿಯೋಲಜಿ ಇಂಡಿಯಾ ಸಂಯುಕ್ತಾಶ್ರಯದಲ್ಲಿ ನಗರದ ಕ್ಯಾತಮಾರನಹಳ್ಳಿ ಶನೇಶ್ವರ ದೇವಸ್ಥಾನದ ಹತ್ತಿರ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಕಣ್ಣಿನ ತಪಾಸಣೆ, ಶ್ರವಣ ತಪಾಸಣೆ ಹಾಗೂ ಮಧುಮೇಹ ತಪಾಸಣೆ ನಡೆಸಲಾಯಿತು. ಸ್ಥಳೀಯರು ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಉಪಯೋಗ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗದ ಕಾರ್ಯದರ್ಶಿ ಹಾಗೂ ನಗರಪಾಲಿಕೆ ಸದಸ್ಯ ಬಿ.ಎಂ.ನಟರಾಜು, ಎನ್.ಆರ್.ಕ್ಷೇತ್ರದ ಅಧ್ಯಕ್ಷ ಸು.ಮುರಳಿ, ಪ್ರಧಾನ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ, ಮಂಜು, ರಾಜ್ಯ ಸ್ಲಂ ಮೋರ್ಚಾ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ, ಜಿ.ಸತೀಶ್ ಇತರರು ಉಪಸ್ಥಿತರಿದ್ದರು. (ವರದಿ-ಎಚ್.ಎನ್, ಎಂ.ಎನ್)

Leave a Reply

comments

Related Articles

error: