ಪ್ರಮುಖ ಸುದ್ದಿಮೈಸೂರು

ಜಿಲ್ಲಾಡಳಿತದಿಂದ ಬೆಳ್ಳಿರಥದಲ್ಲಿ ಕನಕದಾಸರ ಮೆರವಣಿಗೆ

kanaka-3ಕನಕದಾಸ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಗುರುವಾರದಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನಕ ಜಯಂತ್ಯುತ್ಸವ ಸಮಿತಿ ವತಿಯಿಂದ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ನಡೆಯಿತು. ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‍.ಸಿ. ಮಹದೇವಪ್ಪ ಮೆರವಣಿಗೆಗೆ ಚಾಲನೆ ನೀಡಿದರು.

ಬೆಳ್ಳಿರಥದಲ್ಲಿ ಕನಕದಾಸರ ಮೂರ್ತಿಯನ್ನು ಕುಳ್ಳಿರಿಸಿ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಿಂದ ಅರಸು ರಸ್ತೆ, ಕೆ.ಆರ್. ಸರ್ಕಲ್, ಮೆಟ್ರೋಪೋಲ್ ಮಾರ್ಗವಾಗಿ ಕಲಾಮಂದಿರಕ್ಕೆ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ವೀರಗಾಸೆ ಹಾಗೂ ಅನೇಕ ಸಾಂಸ್ಕೃತಿಕ ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ಶಾಸಕ ಎಂ.ಕೆ. ಸೋಮಶೇಖರ್, ಮಾಜಿ ಸಂಸದ ವಿಶ್ವನಾಥ್ ಮತ್ತು ಅನೇಕ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಕೆಪಿಸಿಸಿ ಸದಸ್ಯ ಹಾಗೂ ಮಾಜಿ ಜಿಪಂ ಅಧ್ಯಕ್ಷ ಮರಿಗೌಡ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ಶಿಖಾ ಅವರಿಗೆ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಸಿಲುಕಿ ವಿವಾದಕ್ಕೀಡಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

ಡೊಳ್ಳುಕುಣಿತದೊಂದಿಗೆ ಶಾಸಕ ಎಂ.ಕೆ. ಸೋಮಶೇಖರ್ ಹೆಜ್ಜೆ ಹಾಕಿ ರಂಜಿಸಿದರು.

kanaka-1

 

Leave a Reply

comments

Related Articles

error: