ಮೈಸೂರು

ದುಷ್ಕರ್ಮಿಗಳಿಂದ ಕಾರುಗಳಿಗೆ ಹಾನಿ

ಮೈಸೂರಿನಲ್ಲಿ ಬುಧವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಕಾರುಗಳನ್ನು ಕಿಡಿಗೇಡಿಗಳು ಜಖಂಗೊಳಿಸಿರುವುದು ವರದಿಯಾಗಿದೆ.

ವಿಜಯನಗರ ಪೊಲೀಸ್‍ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 12 ಕಾರುಗಳ ಗ್ಲಾಸ್‍ಗಳನ್ನು ಒಡೆದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಘಟನೆ ನಡೆದ ಸ್ಥಳಗಳಲ್ಲಿನ ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ. ದುಷ್ಕರ್ಮಿಗಳು ಕಬ್ಬಿಣದ ಸರಳಿನಿಂದ ಕಾರುಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ.

6 ದಿನಗಳಲ್ಲಿ ಎರಡನೇ ಬಾರಿ ಈ ಪ್ರಕರಣ ನಡೆದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ರಾತ್ರಿ ಹೊತ್ತಿನಲ್ಲಿ ಪೊಲೀಸ್‍ ಸಿಬ್ಬಂದಿಗೆ ಗಸ್ತು ಹೊಡೆಯುವಂತೆ ಆದೇಶಿಸಿದ್ದಾರೆ.

car

Leave a Reply

comments

Related Articles

error: