ಪ್ರಮುಖ ಸುದ್ದಿಮನರಂಜನೆ

`ಅಂಜನಿಪುತ್ರ’ ಪ್ರದರ್ಶನ ನಿಲ್ಲಿಸುವಂತೆ ನ್ಯಾಯಾಲಯದಿಂದ ಡಿಜಿಐಜಿ ಗೆ ನೋಟಿಸ್

ಬೆಂಗಳೂರು,ಡಿ.29-ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಅಂಜನಿಪುತ್ರ’ ಸಿನಿಮಾ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದರೂ ನ್ಯಾಯಾಲಯದ ಆದೇಶ ಮೀರಿ ಚಿತ್ರ ಪ್ರದರ್ಶನ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಡಿಜಿಐಜಿಗೆ ನೋಟಿಸ್ ನೀಡಿದೆ.

ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ಜ.2 ರವರೆಗೆ ತಡೆಯಾಜ್ಞೆ ನೀಡಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಡಿ.23 ರಂದು ಆದೇಶ ಹೊರಡಿಸಿತ್ತು. ಆದರೂ ಕೋರ್ಟ್ ಆದೇಶ ನಮ್ಮ ಕೈಗೆ ಸಿಕ್ಕಿಲ್ಲ ಎಂಬ ಕಾರಣ ನೀಡಿ ಸಿನಿಮಾ ಪ್ರದರ್ಶನ ಮಾಡಲಾಗುತ್ತಿತ್ತು. ಹೀಗಾಗಿ ಚಿತ್ರತಂಡದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ವಕೀಲ ಜಿ.ನಾರಾಯಣಸ್ವಾಮಿ ಮತ್ತೊಮ್ಮೆ ದೂರು ದಾಖಲಿಸಿದ್ದರು. ಇದರಿಂದ ನ್ಯಾಯಾಲಯ ಡಿಜಿಐಜಿಗೆ ಪ್ರದರ್ಶನ ನಿಲ್ಲಿಸುವಂತೆ ನೋಟಿಸ್ ನೀಡಿದೆ.

ಚಿತ್ರದಲ್ಲಿ ವಕೀಲರಿಗೆ ಅವಮಾನ ಮಾಡುವ ರೀತಿಯಲ್ಲಿ ಸಂಭಾಷಣೆ ಇದೆ. ಹೀಗಾಗಿ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಸಂಭಾಷಣೆಯನ್ನ ತೆಗೆಯುವಂತೆ ಜಿ.ನಾರಾಯಣಸ್ವಾಮಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: