ಕರ್ನಾಟಕ

ಅಕ್ರಮವಾಗಿ ಗಾಂಜಾ ಮಾರಾಟ : ಇಬ್ಬರ ಬಂಧನ

ರಾಜ್ಯ(ಮಂಡ್ಯ)ಜ.1:- ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೆ.ಆರ್.ಪೇಟೆ ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮುರುಕನಹಳ್ಳಿಯ ರಂಗರಾಜು ಮತ್ತು ಪಾಂಡವಪುರದ ಕೃಷ್ಣೇಗೌಡ ಎಂದು ಗುರುತಿಸಲಾಗಿದ್ದು, ಇವರಿಂದ ಎಂಟು ಕೆ.ಜಿ.ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆ.ಆರ್. ಪೇಟೆಯ ಮುರಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ಹೊರವಲಯದ ಗುಡಿಸಲಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕೆಆರ್ ಪೇಟೆ ಪಟ್ಟಣ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕೆಆರ್ ಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: