
ಮೈಸೂರು
ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ: ಎಚ್.ಸಿ. ಮಹದೇವಪ್ಪ
ಲೋಕೋಪಯೋಗಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ನಿರಾಧಾರವಾಗಿದ್ದು, ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ದೂರು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇದೆಲ್ಲ ಕೆಲವರ ಪಿತೂರಿ. ಭ್ರಷ್ಟಾಚಾರ ನಿಗ್ರಹ ದಳವು ತನಿಖೆ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಸತ್ಯ ತಿಳಿದುಬರಲಿದೆ ಎಂದರು.
ಲೋಕೋಪಯೋಗಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದ ಕಾರಣ ಈ ಸಂಬಂಧ ಲೋಕೋಪಯೋಗಿ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ನೀಡಲಾಗಿತ್ತು. “ಕಾನೂನು ಬಾಹಿರ ಟೆಂಡರ್ ನೀಡಲಾಗಿದೆ. ಪ್ರಧಾನ ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಪಡೆಯಲಾಗಿದೆ” ಎಂದು ಆರೋಪಿಸಿ ಮಂಡ್ಯ ಜಿಲ್ಲೆ ಗುತ್ತಿಗೆದಾರ ಬಸವೇಗೌಡ ಎಂಬವರು ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಿದ್ದರು.