ಮೈಸೂರು

ಜನರ ಸುಲಿಗೆ ಮಾಡುತ್ತಿದ್ದವನ ಬಂಧನ

ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬನನ್ನು  ಕೃಷ್ಣರಾಜ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೆಳವಾಡಿ ಗ್ರಾಮದ ಸತೀಶ್ (20) ಬಂಧಿತ ವ್ಯಕ್ತಿ. ಈತನಿಂದ 6 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಮತ್ತೊಬ್ಬ ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

ಚಾಮುಂಡಿಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿ ಬುಧವಾರ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಸತೀಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬೆಟ್ಟದ ಜನಜಂಗುಳಿಯಲ್ಲಿ ನುಗ್ಗಿ ಮೊಬೈಲ್ ಕಳವು ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

comments

Related Articles

error: