
ಮೈಸೂರು
ಪ್ರಸ್ತುತ ಸನ್ನಿವೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಕಾಯ್ದುಕೊಳ್ಳುವುದು ಅತೀ ಮುಖ್ಯ : ಐಜಿಪಿ ವಿಫುಲ್ ಕುಮಾರ್
ಮೈಸೂರು,ಜ.2:- ಪ್ರಸ್ತುತ ಸನ್ನಿವೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಕಾಯ್ದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ದಕ್ಷಿಣ ವಲಯ ಕಚೇರಿಯ ಪೊಲೀಸ್ ಮಹಾ ನಿರೀಕ್ಷಕ ವಿಫುಲ್ ಕುಮಾರ್ ತಿಳಿಸಿದರು.
ಜ್ಯೋತಿ ನಗರದಲ್ಲಿರುವ ದಕ್ಷಿಣ ವಲಯ ಮಟ್ಟದ ಪೊಲೀಸ್ ಕವಾಯತು ಮೈದಾನದಲ್ಲಿ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ವಿಫುಲ್ ಕುಮಾರ್ ಸಮ್ಮುಖದಲ್ಲಿ ಮಂಗಳವಾರ ಐದು ಜಿಲ್ಲೆಗಳ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಕವಾಯತು ನಡೆಸಿದರು. ಈ ಸಂದರ್ಭ ಪೊಲೀಸ್ ಮಹಾ ನಿರೀಕ್ಷಕ ವಿಫುಲ್ ಕುಮಾರ್ ಮಾತನಾಡಿ ಪೊಲೀಸರು ಪೊಲೀಸ್ ಇಲಾಖೆಯಲ್ಲಿರುವ ಸಣ್ಣ ಪುಟ್ಟ ಲೋಪದೋಷಗಳನ್ನು ಸರಿಪಡಿಸಿಕೊಂಡು ಮುಂದುವರಿಯಬೇಕಿದೆ. ಇಲಾಖೆಯ ಗುರಿ, ಸವಾಲುಗಳನ್ನು ತಲುಪಲು ಯತ್ನಿಸಬೇಕು ಎಂದು ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಕರೆ ನೀಡಿದರು. ಈ ಸಂದರ್ಭ ಶ್ವಾನದಳಗಳಿಂದಲೂ ಪ್ರದರ್ಶನ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಮಡಿಕೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ, ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)