ಪ್ರಮುಖ ಸುದ್ದಿಮೈಸೂರು

ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ವಿರೋಧಿಸಿ ವೈದ್ಯರ ಪ್ರತಿಭಟನೆ : ಹೊರ ರೋಗಿಗಳ ವಿಭಾಗ ಬಂದ್ ; ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ಮೈಸೂರು,ಜ.2:- ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆ ವಿರೋಧಿಸಿ ದೇಶಾದ್ಯಂತ ಇಂದು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ ಬಂದ್ ಮಾಡಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮಂಗಳವಾರ ವೈದ್ಯರ ಸಂಘ ಬಂದ್ ಗೆ ಕರೆ ನೀಡಿತ್ತು. ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿದ್ದಾರೆ. ರೋಗಿಗಳಲ್ಲಿ ಗೊಂದಲ ನಿರ್ಮಾಣವಾಗಿದೆ. ಸರ್ಕಾರಿ ಆಸ್ಪತ್ರೆಳಲ್ಲೂ ರೋಗಿಗಳ ಸಂಖ್ಯೆ ಕ್ಷೀಣವಾಗಿದೆ.ಖಾಸಗಿ ಆಸ್ಪತ್ರೆಗಳ ಬಂದ್ ಹಿನ್ನೆಲೆಯಲ್ಲಿ ನಾವು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಆದರೆ ಪ್ರತಿದಿನಕ್ಕಿಂತ ಇಂದು ಹೊರ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಬಹುಶಃ ಸರ್ಕಾರಿ ಆಸ್ಪತ್ರೆಗಳಲ್ಲೂ ಒಪಿಡಿ ಇರಲ್ಲ ಎಂದು ರೋಗಿಗಳಲ್ಲಿ ಗೊಂದಲ ಸೃಷ್ಟಿಯಾಗಿರಬಹುದು ಎಂದು ವೈದ್ಯಕೀಯ ಅಧೀಕ್ಷಕ ಡಾ.ಚಂದ್ರಶೇಖರ್ ಹೇಳಿದರು.

ಸದ್ಯದ ಮಟ್ಟಿಗೆ ಖಾಸಗಿ ಆಸ್ಪತ್ರೆಗಳು ಒಪಿಡಿಗಳನ್ನು ಮುಚ್ಚಿವೆ. ಮೈಸೂರಿನ 175 ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಿದ್ದು, ಈಗಾಗಲೇ ಮೈಸೂರಿನಾದ್ಯಂತ ಎಲ್ಲಾ ವೈದ್ಯರಿಗೂ ಮಾಹಿತಿ ನೀಡಲಾಗಿದೆ. ಸಂಜೆ 4 ಕ್ಕೆ ಸಂಸದರು ಹಾಗೂ ಡಿಸಿಗೆ ಮನವಿ ಸಲ್ಲಿಸಲಾಗುವುದು. ಕೆಲವರಿಗೆ ಮಾಹಿತಿ ಲಭ್ಯವಾಗಿಲ್ಲ. ಹಂತ-ಹಂತವಾಗಿ ಕರೆ ಮಾಡಿ ಮಾಹಿತಿ ನೀಡಲಾಗುವುದು ಎಂದು ಮೈಸೂರು ಐಎಂಎ ಅಧ್ಯಕ್ಷ ವಿಶ್ವೇಶ್ವರ ಮಾಹಿತಿ ನೀಡಿದರು. ಕೆಲವು ವೈದ್ಯರು ಗಳು ಕಾರ್ಯ ಸ್ಥಗಿತಗೊಳಿಸಿದ್ದು, ಇನ್ಕೆಲವರು ತೆರೆದಿರುವುದು ಕಂಡು ಬಂತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: