ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರಾಗಿ ಡಿ.ಎಚ್.ವಘೇಲಾ ನೇಮಕ

ಬೆಂಗಳೂರು,ಜ.2-ರಾಜ್ಯ ಮಾನವ ಹಕ್ಕುಗಳ ಅಧ್ಯಕ್ಷರಾಗಿ ಹೈ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರನ್ನು ನೇಮಿಸಲು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ಐದು ವರ್ಷಗಳಿಂದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಖಾಯಂ ಅಧ್ಯಕ್ಷರಿಲ್ಲದೆ, ಹಂಗಾಮಿ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಮೀರಾ ಸಿ ಸಕ್ಸೇನ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿದ್ದರು. ಇದೀಗ ಸಭೆಯಲ್ಲಿ ಚರ್ಚಿಸಿ ವಘೇಲಾ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲು ತೀರ್ಮಾನಿಸಲಾಗಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ನೇಮಕ ವಿಚಾರವಾಗಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಗೃಹ ಸಚಿವ ರಾಮಲಿಂಗಾರೆಡ್ಡಿ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಇತರರು ಉಪಸ್ಥಿತರಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: