ಕರ್ನಾಟಕಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯದಿಂದ ಭದ್ರಾ ಮೇಲ್ದಂಡೆ ಯೋಜನೆ ನೆನೆಗುದಿಗೆ ಬಿದ್ದಿದೆ : ಯಡಿಯೂರಪ್ಪ

ರಾಜ್ಯ(ಚಿಕ್ಕಮಗಳೂರು)ಜ.2:-  ಚಿಕ್ಕಮಗಳೂರು ವಿಭಾಗದ ಕಡೆಯ ಕ್ಷೇತ್ರವಾದ ತರೀಕೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿವರ್ತನಾಯಾತ್ರೆ ನಡೆಸಿದರು.

ನಗರದ ಬೀದಿಗಳಲ್ಲಿ ಪೂರ್ಣ ಕುಂಭಕಲಶಗಳೊಂದಿಗೆ ಭಾರೀ ಸಂಖ್ಯೆಯ ಅಭಿಮಾನಿಗಳು ರಥಯಾತ್ರೆಗೆ ಸಾಂಪ್ರದಾಯಿಕ ಸ್ವಾಗತ ನೀಡಿದರು. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪನವರು ತರೀಕೆರೆ ಕ್ಷೇತ್ರದ 80 ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ನೀರು ತುಂಬಿಸಲು ಬಿಜೆಪಿ ಸರ್ಕಾರದ ಅವಧಿಯಲ್ಲೇ ಅನುಮೋದನೆ ನೀಡಿದ್ದರೂ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯದಿಂದ ಯೋಜನೆ ನೆನೆಗುದಿಗೆ ಬಿದ್ದಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಎಲ್ಲಾ ಕಾಮಗಾರಿಗಳಿಗೆ ಪುನಃ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು. ಮುಖಂಡರುಗಳಾದ ಶೋಭಾ ಕರಂದ್ಲಾಜೆ, ಸಿಟಿ ರವಿ, ಜೀವರಾಜ್, ಆಯನೂರು ಮಂಜುನಾಥ್, ರುದ್ರೇಗೌಡ, ಪ್ರಾಣೇಶ್, ಚೈತ್ರ, ಗೋಪಿಕೃಷ್ಣ ಮತ್ತು  ಎನ್.ರವಿಕುಮಾರ್ ಮುಂತಾದವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. (ಎಸ್.ಎಚ್)

Leave a Reply

comments

Related Articles

error: