ಮೈಸೂರು

ಜ.4 ರಂದು ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಮೈಸೂರು, ಜ.2 : ನೌಕರಿ ಖಾಯಂಮಾತಿಗೆ ಒತ್ತಾಯಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಜ.4ರ ಬೆಳಗ್ಗೆ 11 ಗಂಟೆಯಿಂದ ರಾಜ್ಯದ ಎಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಸಾಂಕೇತಿಕ ಧರಣಿ ಕೈಗೊಂಡಿದೆ.

ಕಳೆದ ಹತ್ತಾರು ವರ್ಷಗಳಿಂದ ಅರೆಕಾಲಿಕ ಅತಿಥಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿರುವ ಬಹುತೇಕ ಉಪನ್ಯಾಸಕರುಗಳಿಗೆ ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ ಮೀರಿದೆ. ಅಲ್ಲದೇ ಸೇವೆಯ ಭದ್ರತೆ ಇಲ್ಲದೇ ದುಡಿಯುತ್ತಿದ್ದು ಸರ್ಕಾರದಿಂದ ಕೇವಲ ಭರವಸೆ ಮಾತ್ರ ಲಭಿಸುತ್ತಿದ್ದು, ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರಣಿ ನಡೆಸಲಾಗುವುದು ಎಂದು ಅಧ್ಯಕ್ಷ ಕೆ.ಸೋಮಶೇಖರ್, ಕಾರ್ಯದರ್ಶಿ ಎಸ್.ಸ್ವಾಮಿ ತಿಳಿಸಿದ್ದಾರೆ. (ಕೆ.ಎಂ.ಆರ್ಪಿ)

Leave a Reply

comments

Related Articles

error: