ದೇಶಪ್ರಮುಖ ಸುದ್ದಿ

ಮುಂಬೈ ಅಗ್ನಿ ದುರಂತ: ಪ್ರಾಣವನ್ನು ಲೆಕ್ಕಿಸದೆ 8 ಮಂದಿಯನ್ನು ರಕ್ಷಿಸಿದ ಪೊಲೀಸ್ ಪೇದೆ

ಮುಂಬೈ,ಜ.2-ಮುಂಬೈನ ರೆಸ್ಟೋರೆಂಟ್ ವೊಂದರಲ್ಲಿ ನಡೆದ ಅಗ್ನಿ ದುರಂತದಲ್ಲಿ ಪೊಲೀಸ್ ಪೇದೆಯೊಬ್ಬರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಎಂಟು ಮಂದಿಯ ಪ್ರಾಣ ರಕ್ಷಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಡಿ.28ರ ತಡರಾತ್ರಿ ರೆಸ್ಟೋರೆಂಟ್ ನಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ರೆಸ್ಟೋರೆಂಟ್ ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಮುಂಬೈ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದರು.

ಈ ವೇಳೆ ಪೊಲೀಸ್ ಪೇದೆ ಸುದರ್ಶನ ಶಿವಾಜಿ ಶಿಂಧೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಬೆಂಕಿಯ ಮಧ್ಯೆಯೇ ಒಳಹೋಗಿ ಉಸಿರುಗಟ್ಟಿ ನರಳಾಡುತ್ತಿದ್ದವರನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಎಂಟು ಮಂದಿಯ ಪ್ರಾಣ ಉಳಿಸಿದ್ದರು. ಆ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ನೋಡಿದವರೆಲ್ಲ ಮೆಚ್ಚುಗೆ ಶಿಂಧೆ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೆಸ್ಟೋರೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 15 ಮಂದಿ ಮೃತಪಟ್ಟಿದ್ದರು. 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. (ವರದಿ-ಎಂ.ಎನ್)

Leave a Reply

comments

Related Articles

error: