ಮೈಸೂರು

ದೀಪಕ್ ರಾವ್ ಹತ್ಯೆಗೆ ಖಂಡನೆ : ನರಸಿಂಹರಾಜ ಕ್ಷೇತ್ರದ ಬಿಜೆಪಿ ವತಿಯಿಂದ  ಪ್ರತಿಭಟನೆ

ಮೈಸೂರು,ಜ.4:- ಮಂಗಳೂರಿನ ಕಾಟಿಪಳ್ಳದಲ್ಲಿ  ದುಷ್ಕರ್ಮಿಗಳಿಂದ  ಭೀಕರವಾಗಿ ಹತ್ಯೆಯಾದ  ದೀಪಕ್ ರಾವ್ ಹತ್ಯೆಯನ್ನು ಖಂಡಿಸಿ ನರಸಿಂಹರಾಜ ಕ್ಷೇತ್ರದ ಬಿಜೆಪಿ ವತಿಯಿಂದ  ಪ್ರತಿಭಟನೆ ನಡೆಯಿತು.

ನಗರದ ಎಫ್.ಟಿ.ಎಸ್ ವೃತ್ತದ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ  ಪಾಲ್ಗೊಂಡ ನಟರಾಜ್ ಮಾತನಾಡಿ ಮಂಗಳೂರಿನ ಕಾಟಿಪಾಳ್ಯದಲ್ಲಿ ದೀಪಕ್ ರಾವ್ ನನ್ನು  ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.ಈಗಾಗಲೇ ರಾಜ್ಯದಲ್ಲಿ 30 ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ಇದನ್ನೆಲ್ಲಾ ಒಂದು ಬಾರಿ ಗಮನಿಸಿದ್ದೇ ಆದಲ್ಲಿ ಎಲ್ಲೋ ಒಂದು ಕಡೆ ಸಿದ್ದರಾಮಯ್ಯ ಸರ್ಕಾರ ಹಿಂದು ಕಾರ್ಯಕರ್ತರ ಹತ್ಯೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎನಿಸುತ್ತಿದೆ. ಇವರ ದುರಾಡಳಿತ ನೀತಿಯನ್ನು ನಾವು ಖಂಡಿಸುತ್ತೇವೆ. ಜನರಿಗೆ ರಕ್ಷಣೆ ನೀಡದ ಸಿದ್ದರಾಮಯ್ಯ ಸರ್ಕಾರ ನಮಗೆ ಬೇಡ.ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನೂರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: