ಸುದ್ದಿ ಸಂಕ್ಷಿಪ್ತ

ಅರ್ಜಿ ಆಹ್ವಾನ

ಮಡಿಕೇರಿ,ಜ.4-ಭಾರತೀಯ ಕರಾವಳಿ ಭದ್ರತಾಪಡೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2017-18 ನೇ ಸಾಲಿಗೆ ನೀಡುತ್ತಿದೆ.
ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1,2(ಎ),3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಹ್ವಾನಿಸಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 10, ಸಂಜೆ 5.30 ಕೊನಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಲ್ಲಾ ಅಧಿಕಾರಿ ಕೆ.ವಿ ಸುರೇಶ್ ಅವರು ತಿಳಿಸಿದ್ದಾರೆ.

Leave a Reply

comments

Related Articles

Check Also

Close
error: