ಸುದ್ದಿ ಸಂಕ್ಷಿಪ್ತ

ಪರೀಕ್ಷಾ ಪೂರ್ವ ತರಬೇತಿ

ಮೈಸೂರು, ಜ.5:- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2017-18ನೇ ಸಾಲಿಗೆ ನೀಡುವ ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿಗಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಪದವಿಯಲ್ಲಿ ಗಳಿಸಿರುವ ಅಂಕಗಳು ಮತ್ತು ಪ್ರವರ್ಗವಾರು ಮೀಸಲಾತಿಯ  ಮೇಲೆ ಆಯ್ಕೆ ಮಾಡಲಾಗುವುದು.
ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿಲ್ಲ. ಪದವಿಯಲ್ಲಿ ಗಳಿಸಿರುವ ಅಂಕಗಳನ್ನು ಜ.8ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080-65970004 ನ್ನು ಸಂಪರ್ಕಿಸಬಹುದು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

Check Also

Close
error: