ಸುದ್ದಿ ಸಂಕ್ಷಿಪ್ತ

ಜ 6 : ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮ

ಮೈಸೂರು, ಜ.5:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಂಗಳೂರು ಕರ್ನಾಟಕ ರಾಜ್ಯ  ಮದ್ಯಪಾನ ಸಂಯಮ ಮಂಡಳಿ ಹಾಗೂ ಜೆ.ಎಸ್.ಎಸ್. ಮಹಾವಿದ್ಯಾಪೀಠ ಇವುಗಳ ಸಂಯುಕ್ತಾಶ್ರಯದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸ್ತ್ರೀಶಕ್ತಿ  ಸಂಘಗಳ ಸದಸ್ಯರಿಗೆ ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮವನ್ನು ಜನವರಿ 6 ರಂದು ಬೆಳಿಗ್ಗೆ 10.30 ಕ್ಕೆ ಹೆಚ್.ಬಿ. ಸರಗೂರಿನಲ್ಲಿರುವ ಶ್ರೀ ಶಿವರಾತ್ರೀಶ್ವರ ಶಿವಾನುಭವ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಂಗಳೂರಿನ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಹೆಚ್.ಸಿ. ರುದ್ರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ಪ್ರತಾಪ ಸಿಂಹ, ಆರ್. ಧ್ರುವನಾರಾಯಣ್, ಸಿ.ಎಸ್. ಪುಟ್ಟರಾಜು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ ನಜೀರ್ ಅಹಮದ್, ಉಪಾಧ್ಯಕ್ಷ ಜಿ. ನಟರಾಜು, ಹೆಚ್.ಡಿ. ಕೋಟೆ ತಾಲೂಕು ಪಂಚಾಯತ್ ಅಧ್ಯಕ್ಷೆ ಮಂಜುಳ ದೇವಣ್ಣ, ಉಪಾಧ್ಯಕ್ಷೆ ಮಂಜುಳ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯತ್ ಅಧ್ಯಕ್ಷೆ ಪದ್ಮಾವತಿ ಗೋಪಾಲ್, ಉಪಾಧ್ಯಕ್ಷೆ ಭಾಗ್ಯಲಕ್ಷ್ಮಿ ಬಿಲ್ಲಯ್ಯ ಹಾಗೂ ಇನ್ನಿತರ ಅಧಿಕಾರಿಗಳು, ಗಣ್ಯರು ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: