ಪ್ರಮುಖ ಸುದ್ದಿಮೈಸೂರು

ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಕೆ.ಆರ್. ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ

ಕೆ.ಆರ್. ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆಯು ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವದಲ್ಲಿ ಶುಕ್ರವಾರದಂದು ಎಮ್‍ಸಿಸಿ ಹಳೆಯ ಕೌನ್ಸಿಲ್ ಹಾಲ್‍ನಲ್ಲಿ ನಡೆಯಿತು.

ಸಭೆಯಲ್ಲಿ ಕೆ.ಆರ್. ಕ್ಷೇತ್ರದ ಶಾಲೆಗಳ ಸ್ಥಿತಿಗಳ ಬಗ್ಗೆ ಚರ್ಚಿಸಲಾಯಿತು. ಮೈಸೂರು  ಜಿಲ್ಲೆಯು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಬೋಧನೆ ಮತ್ತು ವಿದ್ಯಾರ್ಥಿಗಳ ಬುದ್ಧಿಮಟ್ಟ ಹೆಚ್ಚಿಸಲು ಯಾವೆಲ್ಲ ಕ್ರಮ ಕೈಗೊಂಡಿದ್ದೀರಿ? ಎಂದು ಶಾಸಕರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಸಮರ್ಪಕ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚುತ್ತಿದೆ. ನೀರಿನ ಸಮಸ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇತರ ಲಭ್ಯವಿರುವ ನೀರಿನ ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಕೆಆರ್‍ಎಸ್‍ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಿದೆ. ಹಾಗಾಗಿ ನಗರದಲ್ಲಿ ಕುಡಿಯುವ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆಯಿದೆ. ಕೆ.ಆರ್. ಕ್ಷೇತ್ರದಲ್ಲಿ ಲಭ್ಯವಿರುವ ಬೋರ್‍ವೆಲ್‍ಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ. ಬೋರ್‍ವೆಲ್‍ಗಳಿಂದ ಪಡೆಯುವ ನೀರನ್ನು ಶುದ್ಧೀಕರಿಸುವ ಅಗತ್ಯವಿದೆ ಎಂದು ಸೋಮಶೇಖರ್ ಅವರು ಹೇಳಿದರು.

ಕ್ಷೇತ್ರದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲಾಯಿತು. ಕಾಮಗಾರಿಗಳಿಗೆ ಬಿಡುಗಡೆಯಾದ ಮತ್ತು ಬಳಸಲಾದ ಅನುದಾನದ ಬಗ್ಗೆ ಮಾಹಿತಿ ಪಡೆಯಲಾಯಿತು.

ನಗರ ಪಾಲಿಕೆ ಆಯುಕ್ತ ಜಗದೀಶ್, ಕಾರ್ಪೊರೇಟರ್‍ಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

comments

Related Articles

error: