ಕರ್ನಾಟಕ

ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ವಿಶೇಷ ಪೂಜೆ ಸಲ್ಲಿಕೆ

ರಾಜ್ಯ(ಮಡಿಕೇರಿ)ಜ.7:- ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಸದಸ್ಯರು ಪಿರಿಯಾಪಟ್ಟಣದ ಮಸಣಿಕಮ್ಮ ಮತ್ತು ಕನ್ನಂಬಾಡಿ ಅಮ್ಮನವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಇಂದಿರಾಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಪದಾಧಿಕಾರಿಗಳಾದ ಎಲ್. ರವಿ ಮತ್ತು ರವಿ ಅವರುಗಳು ಸೋಮವಾರಪೇಟೆಯ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪಿರಿಯಾಪಟ್ಟಣಕ್ಕೆ ಪಾದಯಾತ್ರೆ ತೆರಳಿ ಅಲ್ಲಿನ ದೇವಾಲಯದಲ್ಲಿ ಪೂಜೆ ನೆರವೇರಿಸಿದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: