ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ – ಆರೋಪಿ ಬಂಧನ

ಹಾವೇರಿ,ಜ.08: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಯನ್ನು ನಾಗರಾಜ ಗೊರವರ (21) ಎಂದು ಗುರುತಿಸಲಾಗಿದೆ. 14 ವರ್ಷದ ಸಂತ್ರಸ್ತೆ ಪೋಷಕರು ಮೃತಪಟ್ಟಿದ್ದಾರೆ. ಹಾಗಾಗಿ ಆಕೆ ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದಳು. ಶಾಲೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಆ ಸಂದರ್ಭ ಮನೆಯಲ್ಲಿ ಯಾರು ಇಲ್ಲ ಎಂದು ತಿಳಿದ ನಾಗರಾಜ ಏಕಾಏಕಿ ಮನೆಗೆ ನುಗ್ಗಿ ಸಂತ್ರಸ್ತೆಯ ಬಾಯಿಗೆ ಬಟ್ಟೆ ಕಟ್ಟಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿ ಆತನಿಂದ ಹೇಗೋ ತಪ್ಪಿಸಿಕೊಂಡು ಹೊರಗೆ ಬಂದು ಕೂಗಿಕೊಂಡಿದ್ದಾಳೆ.

ಸಂತ್ರಸ್ತೆ ಕೂಗಿಕೊಂಡ ತಕ್ಷಣ ನೆರೆಹೊರೆಯವರು ಬಂದು ಆಕೆಯ ಸಹಾಯಕ್ಕೆ ನಿಂತಿದ್ದಾರೆ. ಈಗ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ನಾಗರಾಜನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. (ವರದಿ: ಪಿ.ಎಸ್ )

Leave a Reply

comments

Related Articles

error: