ಮೈಸೂರು

ಮನೆ ಮನೆ ಕಾಂಗ್ರೆಸ್ ಅಭಿಯಾನ : ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆಗಳನ್ನು ತಿಳಿಸಿದ ವಾಸು

ಮೈಸೂರು,ಜ.9:- ಚಾಮರಾಜ ಕ್ಷೇತ್ರದಲ್ಲಿ ಶಾಸಕ ವಾಸು ಮನೆ ಮನೆ ಕಾಂಗ್ರೆಸ್ ಅಭಿಯಾನ ನಡೆಸಿ ಕಾಂಗ್ರೆಸ್ ಸರ್ಕಾರದ ನಾಲ್ಕೂವರೆ  ವರ್ಷದ ಸಾಧನೆಗಳನ್ನು ತಿಳಿಸಿದರು.

ಚಾಮರಾಜ ಕ್ಷೇತ್ರದ ಮೇಟಗಳ್ಳಿ ವ್ಯಾಪ್ತಿಯ ವಾರ್ಡ್ ನಂ. 29ರಲ್ಲಿ ಮಂಗಳವಾರ ಬೆಳಿಗ್ಗೆ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಸಿದ ಶಾಸಕ ವಾಸು ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಜನರಿಗೆ ತಲುಪಿಸಿದೆ. ಈ ಕ್ಷೇತ್ರ ಮೊದಲು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸೇರಿತ್ತು. ಆಗ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿರಲಿಲ್ಲ. ಈಗ ಚಾಮರಾಜ ಕ್ಷೇತ್ರಕ್ಕೆ ಸೇರ್ಪಡೆಯಾಗಿದೆ. ಈಗ 16ಕೋಟಿ ರೂ ವೆಚ್ಚದಲ್ಲಿ ರಸ್ತೆಯನ್ನು ಅಭಿವೃದ್ಧಿ ಪಡಿಸಿದ್ದೇವೆ. ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯವನ್ನು ಜನತೆಗೆ ಒದಗಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ನಗರ ಪಾಲಿಕೆ ಸದಸ್ಯ ರವೀಶ್, ಕಾಂಗ್ರೆಸ್ ಮುಖಂಡ ಶಿವಣ್ಣ, ಮಂಚೇಗೌಡನಕೊಪ್ಪಲು ರವಿ,ನಗರಾಧ್ಯಕ್ಷ ಆರ್.ಮೂರ್ತಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: