ಮೈಸೂರು

ಭೀಕರ ಅಪಘಾತ : ಬೈಕ್ ಸವಾರನ ಶಿರ ಛಿದ್ರ

ಮೈಸೂರು,ಜ.9:- ನಂಜನಗೂಡಿನ ತಾಲೂಕು ಪಂಚಾಯತ್ ಕಚೇರಿ ಮುಂಭಾಗ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಶಿರ ಛಿದ್ರಗೊಂಡ ಘಟನೆ ನಡೆದಿದೆ.

ಮೃತನನ್ನು ನೆಸ್ಲೆ ಕಾರ್ಖಾನೆ ಉದ್ಯೋಗಿ, ನಂಜನಗೂಡು ತಾಲೂಕಿನ ಸಿಂಧುವಳ್ಳಿಪುರ ಗ್ರಾಮದ ನಿವಾಸಿ  ಕೃಷ್ಣಮೂರ್ತಿ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ಏಳು ಗಂಟೆಯ ಸಮಯದಲ್ಲಿ ನಂಜನಗೂಡು ಪಟ್ಟಣದಿಂದ ನೆಸ್ಲೆ ಕಾರ್ಖಾನೆಗೆ ತೆರಳುತ್ತಿದ್ದ ಮಾರ್ಗ ಮಧ್ಯೆ ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗದ ರಸ್ತೆಯಲ್ಲಿ ಸರಕು ತುಂಬಿದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸರಕು ತುಂಬಿದ ಲಾರಿ ಬೈಕ್ ಸವಾರನ ತಲೆಯ ಮೇಲೆಯೇ ಹರಿದಿದ್ದು, ಸವಾರನ ತಲೆ ಛಿದ್ರ ಗೊಂಡಿದೆ. ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದು, ಲಾರಿ ಚಾಲಕ ಅಪಘಾತ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ನಂಜನಗೂಡು ಸಂಚಾರಿ ಠಾಣೆಯ ಎಸ್ಐ ಆನಂದ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: