ಸುದ್ದಿ ಸಂಕ್ಷಿಪ್ತ

ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ಜ.10.

ಮೈಸೂರು, ಜ. 9 : ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳ ಕುರಿತು, ದತ್ತು ಪ್ರಕ್ರಿಯೆಯಲ್ಲಿ ಆಸ್ಪತ್ರೆಗಳ ಪಾತ್ರ, ಪೋಕ್ಸೋ ಕಾಯ್ದೆ-2012, ಪಿಸಿಪಿಎನ್ಡಿಟಿ, ಎಂಟಿಪಿ ಕಾಯ್ದೆಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಬಿ.ಎಸ್.ಸಿ. ಎಂ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಜ.10ರ ಬೆಳಗ್ಗೆ 10 ಗಂಟೆಗೆ ಜೆಎಸ್ಎಸ್ ಆಸ್ಪತ್ರೆ ಆವರಣದಲ್ಲಿರುವ ಶ್ರೀರಾಜೇಂದ್ರ ಭವನದಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ಮೊಹಮ್ಮದ್ ಮುಜೀರುಲ್ಲಾ ಉದ್ಘಾಟಿಸುವರು, ಜೆಎಸ್ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ನಿರ್ದೇಶಕ ಡಾ.ಎಂ.ಡಿ.ರವಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ರಾಥ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹೆಚ್.ಟಿ.ಕಮಲ, ಜೆಎಸ್ಎಸ್ ಕಾನೂನು ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಸುರೇಶ್ ಮೊದಲಾದವರು ಭಾಗವಹಿಸುವರು. (ಕೆ.ಎಂ.ಆರ್ ಪಿ)

Leave a Reply

comments

Related Articles

error: