
ಮೈಸೂರು
ಜ.12ರಂದು ಸ್ವಾಮಿ ವಿವೇಕಾನಂದ ಜಯಂತಿ
ಮೈಸೂರು, ಜ. 10 : ಜೆ.ಪಿ.ಅಭಿಮಾನಿಗಳ ಬಳಗ ಹಾಗೂ ಬಿಜೆಪಿ ಚಾಮರಾಜ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ವಿವೇಕಾನಂದ ಹುಟ್ಟುಹಬ್ಬದ ಅಂಗವಾಗಿ ಜ.12 ರಂದು ಬೆಳಗ್ಗೆ 10 ಗಂಟೆಗೆ ಒಂಟಿಕೊಪ್ಪಲಿನ ಚೆಲುವಾಂಬ ಪಾರ್ಕ್ ಸ್ವಾಮಿ ವಿವೇಕಾನಂದ ಪ್ರತಿಮೆ ಬಳಿ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವವನ್ನು ಹಮ್ಮಿಕೊಂಡಿರುವುದಾಗಿ ಗಾಯತ್ರಿ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಆತ್ಮಜ್ಞಾನನಂದ ಮಹಾರಾಜ್ ಹಾಗೂ ಸಂಸದ ಪ್ರತಾಪ್ ಸಿಂಹ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ದೇಶಭಕ್ತಿಗೀತೆಗಳು ಹಾಗೂ ಸ್ವಾಮಿ ವಿವೇಕಾನಂದರ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ರಮೇಶ್, ಶಿವಣ್ಣ, ಪುಷ್ಪಾವತಿ, ಉಮೇಶ್ ಉಪಸ್ಥಿತರಿದ್ದರು. (ವರದಿ : ಕೆ.ಎಂ.ಆರ್)