ಕರ್ನಾಟಕಪ್ರಮುಖ ಸುದ್ದಿ

ಸಿದ್ದರಾಮಯ್ಯ ಜಾತಿಯ ವಿಷಬೀಜ ಬಿತ್ತಿ ಸಮಾಜ ಒಡೆಯುತ್ತಿದ್ದಾರೆ : ಯಡಿಯೂರಪ್ಪ

ರಾಜ್ಯ(ಚಿತ್ರದುರ್ಗ)ಜ.11:- ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ನಡೆದ ಯಡಿಯೂರಪ್ಪನವರ ನೇತೃತ್ವದ ಪರಿವರ್ತನಾ ಯಾತ್ರೆಯಲ್ಲಿ  ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದರು.

ಸಭೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಜಾತಿಯ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಸಿದ್ದರಾಮಯ್ಯನವರ ಸರ್ಕಾರ ನಿಮಗೆ ಬೇಕೆ ಎಂದು ಪ್ರಶ್ನಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆಂದು ಭರವಸೆ ನೀಡಿದರು. ಈ ಸಂದರ್ಭ ಮುಖಂಡರುಗಳಾದ ಮುರಳೀಧರ್ ರಾವ್, ಪ್ರಕಾಶ್ ಜಾವ್ಡೇಕರ್, ಜಗದೀಶ್ ಶೆಟ್ಟರ್, ಸಿದ್ದೇಶ್ವರ್, ಈಶ್ವರಪ್ಪ, ಸದಾನಂದ ಗೌಡ, ಪುರಂದೇಶ್ವರಿ, ಗೋವಿಂದ್ ಕಾರಜೋಳ, ರಾಮುಲು, ರೇಣುಕಾಚಾರ್ಯ, ಸಿಟಿ.ರವಿ, ಅರವಿಂದ್ ಲಿಂಬಾವಳಿ, ಕುಮಾರ್ ಬಂಗಾರಪ್ಪ, ನವೀನ್ ಮತ್ತಿತರರು ಭಾಗವಹಿಸಿದ್ದರು. (ಎಸ್.ಎಚ್)

Leave a Reply

comments

Related Articles

error: