ಮೈಸೂರು

ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆ

ಮೈಸೂರು,ಜ.13:- ಶ್ರೀ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಸಾಂಸ್ಕೃತಿಕ ವೇದಿಕೆಯು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೈಸೂರು ರವರ ಸಹಯೋಗದೊಂದಿಗೆ ವಿವೇಕಾನಂದರ ಜಯಂತಿಯನ್ನು ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರಣ್ಯಪುರಂನ ಆಯುರ್ವೇದ ವೈದ್ಯ ಡಾ. ಚಂದ್ರಶೇಖರ್ ಸ್ವಾಮಿವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ  ಮಾತನಾಡಿ  ಸ್ವಾಮಿ ವಿವೇಕಾನಂದರು ನೇರ ನಡೆ, ನೇರ ನುಡಿ, ಅನುಸರಿಸಿದರು. ವಿದೇಶಕ್ಕೆ ಸರ್ವಧರ್ಮ ಸಮ್ಮೇಳನಕ್ಕೆ ತೆರಳಿ  ಹಿಂದೂ ಧರ್ಮದ ಬಗ್ಗೆ ಹೆಮ್ಮೆಯಿಂದ ಭಾಷಣ ಮಾಡುತ್ತಾರೆ ಎಂದು ವಿವೇಕಾನಂದರ ಸಂಪೂರ್ಣ ಚಿತ್ರಣವನ್ನು ವಿದ್ಯಾರ್ಥಿಗಳ ಮುಂದೆ ತೆರೆದಿಟ್ಟರು.

ವೇದಿಕೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಸಾಂಸ್ಕೃತಿಕ ವೇದಿಕೆ ಸಂಚಾಲಕಿ ಶ್ವೇತಶ್ರೀ ಎ, ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: