ಕರ್ನಾಟಕಪ್ರಮುಖ ಸುದ್ದಿ

ಮಹದಾಯಿ ಜಲ ವಿವಾದ : ಮುಖ್ಯಮಂತ್ರಿ ಸಿದ್ದರಾಮಯ್ಯರವರ ದುಡುಕಿನ ನಿರ್ಧಾರದಿಂದ ಸಮಸ್ಯೆ ಹೆಚ್ಚಾಗಿದೆ : ಡಿವಿಎಸ್

ರಾಜ್ಯ(ಮಡಿಕೇರಿ)ಜ.15:- ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ಸಮಸ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.

ಸೋಮವಾರ ಪಟ್ಟಣದ ಜೇಸಿ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಹದಾಯಿ ಜಲ ವಿವಾದ ಇತ್ಯರ್ಥಗೊಳ್ಳದಿದ್ದರೆ, ಉತ್ತರ ಕರ್ನಾಟದಕ ಭಾಗದ ಜನರು ಪ್ರತ್ಯೇಕ ರಾಜಕೀಯ ಪಕ್ಷ ಕಟ್ಟುತ್ತೇವೆ ಎಂದು ಹೇಳಿದ್ದಾರಲ್ಲ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತ್ಯೇಕ ಪಕ್ಷ ಕಟ್ಟುವುದು ಅವರ ವೈಯುಕ್ತಿಕ ನಿರ್ಧಾರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ ವಿಚಾರ ಕುರಿತು ಸರ್ವ ಪಕ್ಷಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬಹುದಾಗಿತ್ತು. ಆದರೆ, ಮುಖ್ಯಮಂತ್ರಿಗಳು ದುಡುಕಿನ ನಿರ್ಧಾರ ಕೈಗೊಂಡರು ಎಂದು ಹೇಳಿದರು. ಹಿಂದೂಗಳ ದಮನಕಾರಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಈಗಲಾದರೂ ದೇವರು ಹಿಂದೂಗಳ ದೇವಸ್ಥಾನಕ್ಕೆ ಹೋಗಲು ಮನಸ್ಸು ನೀಡಿರುವುದು ಉತ್ತಮ ಬೆಳವಣಿಗೆ ಎಂದು ವ್ಯಂಗ್ಯವಾಡಿದರು.

ರಾಜ್ಯ ರಾಜಕಾರಣಕ್ಕೆ ಮರುಳುವ ಇರಾದೆ ಇದೆಯೇ ಎಂದು ಪತ್ರಕರ್ತರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈಗಾಗಲೇ ವಿಶ್ವ ಮೆಚ್ಚಿದ ರಾಷ್ಟ್ರೀಯ ನಾಯಕ ನರೇಂದ್ರ ಮೋದಿಯವರೊಂದಿಗೆ ಕೆಲಸ ಮಾಡುತ್ತಿದ್ದು, ರಾಜ್ಯ ರಾಜಕಾರಣಕ್ಕೆ ಮರಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: