ಮೈಸೂರು

ನಟ, ನಿರ್ದೇಶಕ ಕಾಶಿನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಮೈಸೂರು,ಜ.18:- ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಕಾಶಿನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಸುತ್ತೂರು ಜಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಕಾಶೀನಾಥ್ ಅವರು ಪ್ರತಿಭಾವಂತ ಕಲಾವಿದರು. ಅವರು ವಿಶೇಷವಾಗಿ ಹಾಸ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಾಶೀನಾಥ ಅವರು ಅಭಿನಯಿಸಿರುವ ಎರಡು ಸಿನಿಮಾಗಳನ್ನು ನಾನೂ ನೋಡಿದ್ದೇನೆ. ಅವರದು ಸಾಯುವಂತಹ ವಯಸ್ಸಲ್ಲ. ಚಿಕ್ಕ ವಯಸ್ಸಿನಲ್ಲೇ ನಿಧನರಾಗಿರುವುದು ನೋವು ತರಿಸಿದೆ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ. ಅವರ ನಿಧನದ ನೋವು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬದವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: