ಸುದ್ದಿ ಸಂಕ್ಷಿಪ್ತ

ಸಮುದಾಯ ಭವನ ಉದ್ಘಾಟನೆ

ಬೋಗಾದಿ ಬಸವೇಶ್ವರ ಧರ್ಮಕಾರ್ಯ ಟ್ರಸ್ಟ್ನ ನೂತನ ಸಮುದಾಯ ಭವನದ ಉದ್ಘಾಟನೆಯು ನ.21ರಂದು 10.30 ನೆರವೇರಲಿದ್ದು, ಮಾಜಿ ಪ್ರಧಾನ ಮಂತ್ರಿ ಎಚ್‍.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‍.ಡಿ. ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ.

ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಕ್ಷೇತ್ರದ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ಸೋಮನಾಥ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.

ಶಾಸಕ ಜಿ.ಟಿ. ದೇವೇಗೌಡರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವ  ಡಿ.ಕೆ. ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸತ್ಯನಾರಾಯಣ ಅವರು ಭಾಗವಹಿಸಲಿದ್ದಾರೆ.

Leave a Reply

comments

Related Articles

error: