ಮೈಸೂರು

ಆಸ್ಪತ್ರೆಗಳ ಕುಂದು ಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಿದ ಸಚಿವ ಶರಣ ಪ್ರಕಾಶ್ ಪಾಟೀಲ್

ಮೈಸೂರು,ಜ.18:-ಮೈಸೂರಿನ ವೈದ್ಯಕೀಯ ಕಾಲೇಜಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಭೇಟಿ ನೀಡಿ ಕಾಲೇಜು ಮತ್ತು ಆಸ್ಪತ್ರೆಗಳ ಕುಂದು ಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಮೈಸೂರಿನ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್ , ಕಾಲೇಜು ಮತ್ತು ಆಸ್ಪತ್ರೆ ಆಡಳಿತ ಸಿಬ್ಬಂದಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಮೈಸೂರಿನಲ್ಲಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಗೆ ಸ್ಥಳ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಆಸ್ಪತ್ರೆಯ ಸಿಬ್ಬಂದಿಗಳ ಸಮಸ್ಯೆ, ನರ್ಸ್ ಗಳ ನಿಯೋಜನೆ, ಗುತ್ತಿಗೆ ಕೆಲಸಗಾರರ ಸಂಬಳ ಸಮಸ್ಯೆ ನಿವಾರಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಸ್ಯಾನಿಟೋರಿಯಂ ಆಸ್ಪತ್ರೆಯ ಬೆಡ್ ಸಮಸ್ಯೆ ಸಂಬಂಧ ನನಗೆ ಮಾಹಿತಿ ಇರಲಿಲ್ಲ ಇದರ ಬಗ್ಗೆ ಚರ್ಚಿಸಿ ನಂತರ ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದರು. ಸಚಿವರ ಭೇಟಿ ವೇಳೆ ಶಾಸಕ ವಾಸು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: