ದೇಶಪ್ರಮುಖ ಸುದ್ದಿ

ಮಧ್ಯಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ಪಟೇಲ್ ನೇಮಕ

ನವದೆಹಲಿ,ಜ.20ಮಧ್ಯಪ್ರದೇಶದ ರಾಜ್ಯಪಾಲರಾಗಿ ಗುಜರಾತ್ ನ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ನೇಮಕಗೊಂಡಿದ್ದಾರೆ. ಆ ಮೂಲಕ ಮಧ್ಯಪ್ರದೇಶದ ಮೊದಲ ಮಹಿಳಾ ರಾಜ್ಯಪಾಲೆ ಆನಂದಿಬೆನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆನಂದಿಬೆನ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಟ್ವಿಟ್ ನಲ್ಲಿ ತಿಳಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಗುಜರಾತಿನ ಬಿಜೆಪಿ ವಕ್ತಾರ ಭರತ್ ಪಾಂಡ್ಯ, ಆನಂದಿಬೆನ್ ಅವರು ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕವಾಗಿರುವುದು ಗುಜರಾತಿನ ಹೆಮ್ಮೆಯ ವಿಷಯ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಆನಂದಿಬೆನ್ ರೈತನ ಮಗಳು. ಗುಜರಾತಿನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ನೇಮಕವಾಗಿದ್ದರು. ಇದೀಗ ಮಧ್ಯಪ್ರದೇಶದ ಮೊದಲ ಮಹಿಳಾ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಇದು ಗುಜರಾತಿಗೆ ಹೆಮ್ಮೆ ಎನಿಸಿದೆ ಎಂದಿದ್ದಾರೆ. (ವರದಿ-ಎಂ.ಎನ್)

 

Leave a Reply

comments

Related Articles

error: