ಕರ್ನಾಟಕ

ಕೊಡವ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ : ಜ.25 ರಂದು ತಜ್ಞರೊಂದಿಗೆ ಸಂವಾದ, ಜ.29 ಕ್ಕೆ ದಿ.ಪಂದ್ಯಂಡ ಬೆಳ್ಯಪ್ಪ ಸ್ಮರಣೆ

ರಾಜ್ಯ(ಮಡಿಕೇರಿ) ಜ.20 : – ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಜ.25 ರಂದು ತಜ್ಞರೊಂದಿಗೆ ಸಂವಾದ ಮತ್ತು ಜ.29 ರಂದು ದಿ.ಪಂದ್ಯಂಡ ಬೆಳ್ಯಪ್ಪ ಸ್ಮರಣೆ ಹಾಗೂ ವಿಚಾರ ಮಂಡನೆ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿಯ ನೂತನ ಅಧ್ಯಕ್ಷ ಪೆಮ್ಮಂಡ ಕೆ.ಪೊನ್ನಪ್ಪ, ಜ.25 ರಂದು ನಗರದ ದೇವರಾಜ ಅರಸು ಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬಾಳುಗೋಡು ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷರುಗಳಾದ ಡಾ. ಉಳ್ಳಿಯಡ ಎಂ. ಪೂವಯ್ಯ, ಬಾಚರಣಿಯಂಡ ಪಿ. ಅಪ್ಪಣ್ಣ, ಚಿರಿಯಪಂಡ ರಾಜಾ ನಂಜಪ್ಪ, ಉಳ್ಳಿಯಡ ಡಾಟಿ ಪೂವಯ್ಯ, ಐಮುಡಿಯಂಡ ರಾಣಿ ಮಾಚಯ್ಯ, ಅಡ್ಡಂಡ ಸಿ. ಕಾರ್ಯಪ್ಪ, ಬಿದ್ದಾಟಂಡ ಎಸ್. ತಮ್ಮಯ್ಯ ಹಾಗೂ ಗೌರವ ಅತಿಥಿಯಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಮಾತಂಡ ಸಿ. ಮೊಣಪ್ಪ ಪಾಲ್ಗೊಳ್ಳಲಿದ್ದಾರೆ. ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮತ್ತು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.29 ರಂದು ದಿ.ಪಂದ್ಯಂಡ ಬೆಳ್ಯಪ್ಪ ಸ್ಮರಣೆ ಹಾಗೂ ವಿಚಾರ ಮಂಡನೆ ಕಾರ್ಯಕ್ರಮ ನಡೆಯಲಿದೆ. ನಗರದ ದಿ. ಪಂದ್ಯಂಡ ಬೆಳ್ಯಪ್ಪ ಸ್ಮಾರಕ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ  ಎಂ. ಆರ್.ಸೀತಾರಾಮ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಹಾಗೂ ಎಂ.ಪಿ.ಸುನಿಲ್‍ಸುಬ್ರಮಣಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಮಾಂಗೆರ ಪದ್ಮಿನಿ ಪೊನ್ನಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ ಹಾಗೂ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಂದ್ಯಂಡ ಬೆಳ್ಯಪ್ಪ ಅಧ್ಯಯನ ಕೃತಿಯ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪತ್ರಿಕೋದ್ಯಮಕ್ಕೆ ಕೊಡಗು ಪತ್ರಿಕೆಯ ಕೊಡುಗೆ ಎಂಬ ವಿಷಯದ ಕುರಿತು ವಿಚಾರಮಂಡನೆ ಮಾಡಲಿದ್ದು, ಸಾಹಿತಿಗಳಾದ ಷಂಶುದ್ದೀನ್ ಸ್ವಾತಂತ್ರ್ಯ ಚಳುವಳಿಯಲ್ಲಿ ಬೆಳ್ಯಪ್ಪ ಅವರ ಪಾತ್ರ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷರಾದ ಮನು ಮುತ್ತಪ್ಪ ಸಹಕಾರ ಕ್ಷೇತ್ರದಲ್ಲಿ ಪಂದ್ಯಂಡ ಬೆಳ್ಯಪ್ಪ ಎಂಬ ವಿಷಯದ ಕುರಿತು ವಿಚಾರಮಂಡನೆ ಮಾಡಲಿದ್ದಾರೆ ಎಂದು ಪೊನ್ನಪ್ಪ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿಯ ಉಪಾಧ್ಯಕ್ಷರಾದ ಐತಿಚಂಡ ರಮೇಶ್ ಉತ್ತಪ್ಪ, ರಿಜಿಸ್ಟ್ರಾರ್ ಉಮರಬ್ಬ ಸದಸ್ಯರಾದ ಮುದ್ದಯ್ಯ ಉಪಸ್ಥಿತರಿದ್ದರು.  (ಕೆಸಿಐ,ಎಸ್.ಎಚ್)

Leave a Reply

comments

Related Articles

error: