ಸುದ್ದಿ ಸಂಕ್ಷಿಪ್ತ

ಜ.21ಕ್ಕೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ಧತೆ ಕಾರ್ಯಾಗಾರ

ಮಡಿಕೇರಿ,ಜ.20-ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಜ. 21 ರಂದು ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ದಲಿತ ವಿದ್ಯಾರ್ಥಿಗಳಿಗೆ ಕಾರ್ಯಗಾರ ಏರ್ಪಡಿಸಲಾಗಿದೆ.

ಪತ್ರಿಕಾ ಹೇಳಿಕೆ ನೀಡಿರುವ ಕೊಡಗು ಜಿಲ್ಲಾ ದ.ಸಂ.ಸ ಹಾಗೂ ಕಾರ್ಯಕಾರಿ ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್. ದಿವಾಕರ್, ನಗರದ ಜೂನಿಯರ್ ಕಾಲೇಜಿನ ಕಾರ್ಯಪ್ಪ ಆಡಿಟೋರಿಯಂನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿಯಾದ ಡಾ. ಹೆಚ್.ವಿ. ದೇವದಾಸ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯ ಅತಿಥಿ ಹಾಗೂ ಸಂಪನ್ಮೂಲವ್ಯಕ್ತಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ. ಸೂರ್ಯಸೇನ್, ಮಡಿಕೇರಿ ಜಿಲ್ಲಾ ಪಂಚಾಯತ್ ಅಧಿಕಾರಿಯಾದ ಲಕ್ಷ್ಮೀ ಚಂದ್ರಶೇಖರ್ ಹಾಗೂ ಬೆಂಗಳೂರು ವಾಣಿಜ್ಯ ತೆರಿಗೆ ಅಧಿಕಾರಿ ಎಂ.ಎ. ಯಶವಂತ, ಕೊಡಗು ಜಿಲ್ಲಾ ದ.ಸಂ.ಸ, ವಿಭಾಗೀಯ ಸಂಚಾಲಕರಾದ ಎನ್. ವೀರಭದ್ರಯ್ಯ ಭಾಗವಹಿಸಲಿದ್ದು, ಕೊಡಗು ಜಿಲ್ಲಾ ಪ್ರಬುದ್ಧ ನೌಕರರ ಒಕ್ಕೂಟದ ಅಧ್ಯಕ್ಷರು ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಹ ಪ್ರಾಧ್ಯಾಪಕರಾದ ಡಾ. ವಿ.ಎಸ್. ಸತೀಶ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ ಎಂದು ದಿವಾಕರ್ ತಿಳಿಸಿದ್ದಾರೆ. (ವರದಿ-ಕೆಸಿಐ, ಎಂ.ಎನ್)

Leave a Reply

comments

Related Articles

error: