ದೇಶಪ್ರಮುಖ ಸುದ್ದಿ

ಸಿಬಿಐ ನ್ಯಾಯಮೂರ್ತಿ ಲೋಯಾ ಸಾವಿನ ಎಲ್ಲಾ ಪ್ರಕರಣಗಳು ಸುಪ್ರೀಂಗೆ

ನವದೆಹಲಿ,ಜ.22- ಸಿಬಿಐ ನ್ಯಾಯಮೂರ್ತಿ ಬ್ರಿಜ್ ಗೋಪಾಲ್ ಹರ್ ಕಿಶನ್ ಲೋಯಾ ನಿಗೂಢ ಸಾವಿನ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ ಮೊದಲ ವಾರಕ್ಕೆ ಮುಂದೂಡಿದೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಲೋಯಾ ಸಾವಿನ ಪ್ರಕರಣದ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದ ಎರಡು ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗೆ ವರ್ಗಾವಣೆ ಮಾಡಿಕೊಳ್ಳಲು ನಿರ್ಧರಿಸಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಾನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಸಂದರ್ಭ ಹೇಳಿದೆ.

ವಿಚಾರಣೆ ವೇಳೆ ಹಾಜರಾಗಿದ್ದ ಮಹಾರಾಷ್ಟ್ರ ಪರ ವಕೀಲರು, ಲೋಯಾ ಪ್ರಕರಣವನ್ನು ಎಚ್ಚರಿಕೆಯಿಂದ ತನಿಖೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮೂವರು ನ್ಯಾಯಾಧೀಶ ನ್ಯಾಯಪೀಠ ಲೋಯಾ ಕಾರ್ಡಿಯಿಕ್ ಅರೆಸ್ಟ್ ನಿಂದ ಸಾವನ್ನಪ್ಪಿದ್ದಾರೆ ಎಂಬ ವಕೀಲರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಯಾಗಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಲೋಯಾ 2014 ಡಿಸೆಂಬರ್ 1ರಂದು ಸಂಸಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು.

ಸಾವು ಅಸಹಜ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಲೋಯಾ ಅವರಿಗೆ ದೊಡ್ಡ ಮೊತ್ತದ ಲಂಚದ ಆಮಿಷ ಒಡ್ಡಲಾಗಿತ್ತು ಎಂದು ಅವರ ಸಹೋದರಿ ಆರೋಪಿಸಿದ್ದರು. (ವರದಿ-ಎಂ.ಎನ್)

 

Leave a Reply

comments

Related Articles

error: