ಮೈಸೂರು

ಅಡ್ಯೂಸ್’ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಮೈಸೂರು,ಜ.23:-ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್‍ವಿಜೀಸ್ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ‘ಅಡ್ಯೂಸ್’ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನುಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿಶ್ವಪ್ರಜ್ಞ ಕಾಲೇಜಿನ ಶೈಕ್ಞಣಿಕ ಸಲಹೆಗಾರ ಹಾಗೂ ವಿಜಯ ವಿಠ್ಠಲ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಮುಖ್ಯ ಅತಿಥಿಯಾಗಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಹಿರಿಯ ಅಭಿಯಂತರ ಹಾಗೂ ವಿಶ್ವಪ್ರಜ್ಞ ಶೈಕ್ಷಣಿಕ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್. ಮಹೇಂದ್ರ ಭಾಗವಹಿಸಿದ್ದರು. ಈ ಸಂದರ್ಭ  ಪ್ರಾಂಶುಪಾಲರಾದ ರಚನ್ ಅಪ್ಪಣಮಯ್ಯ, ಆಡಳಿತಾಧಿಕಾರಿ ಡಾ. ಕೆಂಪೇಗೌಡ,,ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿವಿಶ್ವನಾಥ್ ಶೇಷಾಚಲ, ಕಾಲೇಜಿನ ಖಜಾಂಜಿ ಮನೋಹರ್ ಎಸ್.  ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: