ಮೈಸೂರು

ಕೇಂದ್ರ ಸಚಿವ ಅನಂತಕುಮಾರ್ ಹೇಳಿಕೆ ಖಂಡಿಸಿ ಪ್ರತಿಭಟನೆ

ಮೈಸೂರು,ಜ.23:- ಸಂವಿಧಾನ ಬದಲಾಯಿಸಬೇಕೆಂದ ಕೇಂದ್ರ ಸಚಿವ ಅನಂತಕುಮಾರ್ ಹೇಳಿಕೆ ಖಂಡಿಸಿ ಹಾಗೂ ದಲಿತರು ಮತ್ತು ಹೋರಾಟಗಾರರನ್ನು ಅವಹೇಳನಕಾರಿ ಪದಗಳಿಂದ ನಿಂದಿಸಿ ಅಪಮಾನ ಮಾಡಿರುವುದನ್ನು ಖಂಡಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿರುವುದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವಾಗಿದೆ. ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ದಲಿತರು, ಹೋರಾಟಗಾರರನ್ನು ಅವಹೇಳನಕಾರಿ ಪದಗಳಿಂದ ನಿಂದಿಸಿದ್ದಾರೆ. ಅವರನ್ನು ಪ್ರಧಾನಿ ಮೋದಿಯವರು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿದರಲ್ಲದೇ, ಅನಂತಕುಮಾರ್ ಹೆಗಡೆ ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆಯಲ್ಲಿ ಆರ್.ಆನಂದಕುಮಾರ್ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: