ಮೈಸೂರು

ಸಾರ್ವಜನಿಕರ ಕುಂದುಕೊರತೆ ನಿವಾರಣೆಗಾಗಿ ಸಂಚಾರ ಠಾಣೆಗಳಲ್ಲಿ ಸಭೆ

rao-city-police-commissionerನಗರ ಪೊಲೀಸ್ ಇಲಾಖೆಯು ನಡೆಸುತ್ತಿರುವ ಸಾರ್ವಜನಿಕರ ಕುಂದುಕೊರತೆ ಸಭೆಯು ಬಾನುವಾರ ನಗರದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಡೆಯಿತು.

ಪೊಲೀಸ್ ಇಲಾಖೆಯನ್ನು ಜನಸ್ನೇಹಿಗೊಳಿಸಲು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಈ ಸಭೆಯನ್ನು ನಡೆಸಲಾಯಿತು.

ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಅವರ ಆದೇಶದ ಮೇರೆಗೆ ಶನಿವಾರ ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಡೆದ ಸಭೆಯಲ್ಲಿ ಜನರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಬಡಾವಣೆಗಳಲ್ಲಿ ಇರುವ ಸಮಸ್ಯೆಗಳನ್ನು ಹೇಳಿಕೊಂಡು ಪರಿಹರಿಸುವಂತೆ ಮನವಿ ಮಾಡಿದರು.

ವಿವಿಪುರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಇಲ್ ಸ್ಪೆಕ್ಟರ್ ವಿವೇಕಾನಂದ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಬಡಾವಣೆಯಲ್ಲಿ ಸಂಖ್ಯಾಫಲಕ ಇಲ್ಲದ ವಾಹನಗಳು ಸಾಕಷ್ಟು ಸಂಚರಿಸುತ್ತಿವೆ. ಅವುಗಳ ಬಗ್ಗೆ ನಿಗಾ ವಹಿಸಬೇಕು. ಕಾಳಿದಾಸ ರಸ್ತೆ, ಈಜೀ ಡೇ ಬಳಿಯ ರಸ್ತೆಗಳಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿರುತ್ತಾರೆ. ಹೀಗಾಗಿ ಪೊಲೀಸ್ ಗಸ್ತನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ನಗರದ ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಭೆ ಇನ್ ಸ್ಪೆಕ್ಟರ್ ನಾಗೇಗೌಡ ಅವರ ನೇತೃತ್ವದಲ್ಲಿ ನಡೆಯಿತು. ಅಶೋಕ ವೃತ್ತದಲ್ಲಿರುವ ಬಸ್ ನಿಲ್ದಾಣದಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ನಿಲ್ದಾಣವನ್ನು ರಾಮಮಂದಿರದ ಬಳಿ ನಿರ್ಮಿಸಬೇಕೆಂದು ಸಾರ್ವಜನಿಕರು  ಕೋರಿದರು.

ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಎಸ್ ಐ ಮರಿಗೌಡ ಅವರ ನೇತೃತ್ವದಲ್ಲಿ ಸಭೆ ಜರುಗಿತು. ನಗರ ಸಾರಿಗೆ ಮುಂಭಾಗ ಅಳವಡಿಸಿರುವ ರಸ್ತೆ ವಿಭಜಕದಿಂದ ವಾಹನ ಸಂಚಾರ ಕಷ್ಟವಾಗುತ್ತಿದೆ. ಅಲ್ಲದೇ ಆಟೋ ಚಾಲಕರು ರಸ್ತೆಯಲ್ಲಿ ಬಾಡಿಗೆಗಾಗಿ ನಿಧಾನಕ್ಕೆ ಆಟೋ ಚಾಲನೆ ಮಾಡುವುದರಿಂದ ಕೂಡ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಸಮಸ್ಯೆಯನ್ನು ಮುಂದಿಟ್ಟರು.

ಸಿದ್ದಾರ್ಥ ಸಂಚಾರ ಪೊಲೀಸ್ ಠಾಣೆಯಲ್ಲಿ ಎಸ್ಐ ಹರೀಶ್ ಅವರ ನೇತೃತ್ವದಲ್ಲಿ, ಎನ್ ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕಿರಣ್ ಕುಮಾರ್ ನೇತೃತ್ವದಲ್ಲಿ ಸಾರ್ವಜನಿಕರ ಸಭೆ ನಡೆಸಲಾಯಿತು. ಇಲ್ಲಿಯೂ ಕೂಡ ಜನರು ಸಾಕಷ್ಟು ಸಮಸ್ಯೆಗಳನ್ನು ಹೇಳಿಕೊಂಡರು. ಸಮಸ್ಯೆಗಳ ಪಟ್ಟಿ ಮಾಡಿಕೊಂಡಿರುವ ಪೊಲೀಸರು, ಅವುಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

Leave a Reply

comments

Related Articles

error: