
ಮೈಸೂರು
ಜ.24 ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಮೈಸೂರು, ಜ.23 – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 24 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು,
ಬೆಳಿಗ್ಗೆ 9-30 ಕ್ಕೆ ಸಾ.ರಾ.ಕನ್ವೆನ್ಷನ್ ಹಾಲ್ನಲ್ಲಿ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಪಡುವಾರಹಳ್ಳಿಯಲ್ಲಿ ನಡೆಯಲಿರುವ ಸರ್ಕಾರಿ ಮಹಿಳಾ ವಾಣಿಜ್ಯ ಕಾಲೇಜು ಮತ್ತು ನಿರ್ವಹಣಾ ಕಾಲೇಜು ಕಟ್ಟಡ, 1ನೇ ಹಂತ ಉದ್ಘಾಟನೆ ಹಾಗೂ ವಿದ್ಯಾರ್ಥಿನಿಲಯ 1ನೇ ಹಂತ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2-30 ಗಂಟೆಗೆ ಇಲವಾಲ ಗ್ರಾಮದಲ್ಲಿ ಒಳಚರಂಡಿ ಯೋಜನೆ ಶಂಕುಸ್ಥಾಪನೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಲಿಂಗದೇವರ ಕೊಪ್ಪಲು (ಪ್ರಜಾಪಿತ ಬ್ರಹ್ಮಕುಮಾರಿ ಸಮಾಜ ಕಟ್ಟಡದ ಎದುರು)ಇಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವರು.
ಸಂಜೆ 6-30 ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.