ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಖಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಜ.24:- ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸಂಜೆ ಖಾಸಗಿ ಹೋಟೆಲ್ ನಲ್ಲಿ  ಅಭ್ಯರ್ಥಿ ಕುರಿತು ಅಭಿಪ್ರಾಯ ಸಂಗ್ರಹಿಸಲು ಕರೆದಿದ್ದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಪಷ್ಟ ನಿಲುವು ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೇ ಇದೆ ಎಂದಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ತಲಾ ಇಬ್ಬರು ಮುಖಂಡರು ಪಾಲ್ಗೊಂಡಿದ್ದು, ಈ ಕ್ಷೇತ್ರದ ಅಭ್ಯರ್ಥಿ ಯಾರಾಗಬೇಕು ಎಂದು ಪ್ರಶ್ನಿಸಿದಾಗ ಸಿದ್ದರಾಮಯ್ಯನವರೇ ಅಲ್ಲಿನ ಅಭ್ಯರ್ಥಿಯಾಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದಿದ್ದಾರೆ ಎನ್ನಲಾಗಿದೆ. ಇದು ನನ್ನ ನಾನು ಸ್ಪರ್ಧಿಸುವ ಕೊನೆಯ ಚುನಾವಣೆಯಾಗಲಿದೆ.ಯಾಕೆಂದರೆ ನನಗೀಗಲೇ 71 ವರ್ಷವಾಯಿತು. ಮುಂದಿನ ಚುನಾವಣೆ ಎನ್ನುವಷ್ಟರಲ್ಲಿ 76 ಆಗಲಿದೆ. ಆಗ ಮತ್ತೆ ನನ್ನನ್ನು ಚುನಾವಣೆಗೆ ನಿಲ್ಲುವಂತೆ ಒತ್ತಾಯಿಸಬೇಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ನನಗೆ ಚುನಾವಣೆಯಲ್ಲಿ ನನಗೆ ಮರುಜನ್ಮ ನೀಡಿದ ಕ್ಷೇತ್ರವಾಗಿದ್ದು, ಇಲ್ಲಿಯೇ ನನ್ನ ಕೊನೆಯ ಚುನಾವಣೆಗೂ ಸ್ಪರ್ಧಿಸಿ ಜನರ ಋಣ ತೀರಿಸುತ್ತೇನೆ. ನಾನು ಎರಡೂ ಕಡೆ ಸ್ಪರ್ಧಿಸುತ್ತೇನೆ ಎಂದು ಹೇಳಿರುವುದು ಕೇವಲ ಊಹಾಪೋಹ. ಮುಂದಿನ ಸರ್ಕಾರ ಕೂಡ ಕಾಂಗ್ರೆಸ್ ನದ್ದೇ ಆಗಿರಲಿದ್ದು ಮುಂದಿನ ಮುಖ್ಯಮಂತ್ರಿ ಕೂಡ ನಾನೇ ಅದರಲ್ಲಿ ಯಾವುದೇ ಅನುಮಾನ ಬೇಡ ಎನ್ನುವ ವಿಶ್ವಾಸವನ್ನೂ ಕೂಡ ವ್ಯಕ್ತಪಡಿಸಿದ್ದಾರೆ.

ಸಂಸದ ಧ್ರುವನಾರಾಯಣ, ಮುಡಾ ಅಧ್ಯಕ್ಷ ಧ್ರುವಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: