ಕರ್ನಾಟಕ

ವರ್ಗಾವಣೆ ಆದೇಶ ಕೂಡಲೇ ನಿಲ್ಲಿಸಿ: ಚುನಾವಣಾ ಆಯೋಗ

ಬೆಂಗಳೂರು,ಜ.24: , ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ಜಿಲ್ಲಾಧಿಕಾರಿಗಳ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.

ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದ್ದು, ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಆಯೋಗ ಸೂಚನೆ ನೀಡಿದೆ. (ವರದಿ: ಪಿ.ಎಸ್)

Leave a Reply

comments

Related Articles

error: