ಪ್ರಮುಖ ಸುದ್ದಿಮೈಸೂರು

ಬರ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

ಉತ್ತರ ಪ್ರದೇಶ ರೈಲು ದುರಂತ ಪ್ರಕರಣದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ನನಗೆ ಗೊತ್ತಿಲ್ಲ. ಆದ್ರೆ ಈ ಬಗ್ಗೆ ತನಿಖೆ ಆಗಬೇಕು. ರೈಲ್ವೆ ಇಲಾಖೆಯಿಂದ ಪರಿಹಾರ ಕೊಡಬೇಕು ಎಂದು ಹೇಳಿದರು.

ಬಾನುವಾರದಂದು ಮೈಸೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, 4656 ಕೋಟಿ ರು. ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪರಿಹಾರ ಹಣ ಶೀಘ್ರ ಬಿಡುಗಡೆ ಮಾಡುವಂತೆ ನಮ್ಮ ಇಬ್ಬರು ಮಂತ್ರಿಗಳು ಕೇಂದ್ರದ ಜೊತೆ ಮಾತುಕತೆ ನಡೆಸಿದ್ದಾರೆ.  ನಾನು ದೆಹಲಿಗೆ ಹೋದಾಗ ಈ ಬಗ್ಗೆ  ಮಾತನಾಡುತ್ತೇನೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಸಚಿವ ತನ್ವೀರ್ ಸೇಠ್ ಮೇಲಿನ ಆರೋಪ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಸೈಬರ್ ಕ್ರೈಂ ವರದಿ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಬಿಎಸ್ ವೈ  ಅವರು  ಕೇಳಿದ ಕೂಡಲೇ ರಾಜೀನಾಮೆ ತೆಗೆದುಕೊಳ್ಳಲು ಆಗುವುದಿಲ್ಲ. ಬಿಜೆಪಿಯವರು ಸದನದ ಒಳಗೆ ಉದ್ದೇಶಪೂರ್ವಕವಾಗಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದರು. ಅದಕ್ಕೂ ತನ್ವೀರ್ ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು.

ಜೆಡಿಎಸ್ ಪಕ್ಷ ಯಾವ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಹಾಗಾಗಿ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.

ಕಾರ್ಮಿಕರಿಂದ ಧರಣಿ: ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಬಳಿ ಫಾಲ್ಕನ್ಸ್ ಟೈರ್ಸ್ ಕಾರ್ಖಾನೆ ಕಾರ್ಮಿಕರು ಕುಟುಂಬ ಸಮೇತ ಆಗಮಿಸಿ ಧರಣಿ ಪ್ರತಿಭಟನೆ ನಡೆಸಿದರು.

ಕಳೆದ ಎರಡು ವರ್ಷಗಳಿಂದ ಲಾಕ್ ಹೌಟ್ ಆಗಿರುವ ಫಾಲ್ಕನ್ಸ್ ಟೈರ್ಸ್ ಕಾರ್ಖಾನೆಯ ಪುನರಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯ ಪ್ರವೇಶಿಸುವಂತೆ ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಮೈಸೂರಿನ ಸಿಎಂ ನಿವಾಸದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

cm-siddu-mysore-2

 

Leave a Reply

comments

Related Articles

error: