ಕರ್ನಾಟಕ

ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಬಿ.ಎಸ್. ಸದಾನಂದ್

ರಾಜ್ಯ(ಮಡಿಕೇರಿ)ಜ.25:- ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್. ಸದಾನಂದ್ ಹೇಳಿದರು.

ಜ.31ರಂದು ಸೋಮವಾರಪೇಟೆಯಲ್ಲಿ ಆಯೋಜಿಸಲಾಗಿರುವ ವಿವೇಕಾನಂದರ 155ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಮಾನಸ ಸಭಾಂಗಣದಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಮಿತಿಯ ವತಿಯಿಂದ ವಿವೇಕಾನಂದರ ಜೀವನ ತತ್ವ, ಸಂದೇಶಗಳನ್ನು ಸಮಾಜಕ್ಕೆ ತಲುಪಿಸುವ ಕಾರ್ಯ ನಡೆಸಲಾಗುತ್ತಿದ್ದು, ಈ ಬಾರಿ 155ನೇ ವರ್ಷದ ಜನ್ಮ ದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಭವಿಷ್ಯದಲ್ಲಿ ಯಶಸ್ಸು ತಮ್ಮದಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶ್ರೀಧರ್, ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ವಿವೇಕಾನಂದ ಯುವ ಬ್ರಿಗೇಡ್‍ನ ಸಂಚಾಲಕ ಅಭಿಷೇಕ್, ರೋಟರಿ ಮಾಜಿ ಅಧ್ಯಕ್ಷ ಎ.ಪಿ. ವೀರರಾಜು, ರೊಟೇರಿಯನ್‍ಗಳಾದ ರಾಜಶ್ರೀ ಸದಾನಂದ್, ಆಶಾ ವೀರರಾಜು ಅವರುಗಳು ಇದ್ದರು.

ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಕೃತಿ ಹಾಗೂ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವೇಕಾನಂದ ಬಗ್ಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: