ಮೈಸೂರು

ಬಾಸುದೇವ ಸೋಮಾನಿ ಮಹಾವಿದ್ಯಾಲಯದಲ್ಲಿ 69ನೇ ಗಣರಾಜ್ಯೋತ್ಸವ

ಮೈಸೂರು,ಜ.26:-  ಬಾಸುದೇವ ಸೋಮಾನಿ  ಮಹಾವಿದ್ಯಾಲಯದಲ್ಲಿ 69ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಕಾರ್ಯಕ್ರಮ ನಾಡಗೀತೆಯೊಂದಿಗೆ ಆರಂಭವಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ದಿ ಇನ್ಸ್‍ಟಿಟ್ಯೂಟ್ ಆಫ್ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಹೆಚ್.ಎನ್.ನಾಗರಾಜ್ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು

ಈ ಸಂದರ್ಭ  ಮ್ಯಾನೇಜಿಂಗ್ ಟ್ರಸ್ಟಿ ಡಾ. ಎಂ ಪುಟ್ಟಸ್ವಾಮಿ ಮಾತನಾಡಿ ವಿದ್ಯಾರ್ಥಿಗಳಿಗೆ ಸಮಯದ ಮಹತ್ವವನ್ನು ತಿಳಿಸಿ, ಸಮಯಪಾಲನೆಯಿಂದ ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಬಹುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಮಹದೇವಯ್ಯ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಈ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವವಾಡುತ್ತಿವೆ. ಈ ಸಮಸ್ಯೆಗಳನ್ನು ನಿವಾರಿಸುವಲ್ಲಿ ಪ್ರತಿಯೊಬ್ಬ ಯುವಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿ ಗಣರಾಜ್ಯೋತ್ಸವ ದಿನಾಚರಣೆಯ ಹಿನ್ನೆಲೆ ಮತ್ತು ಮಹತ್ವವನ್ನು ತಿಳಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ವೈಷ್ಣವಿ .ಡಿ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸೌಮ್ಯ ಎಂ ಕಾರ್ಯಕ್ರಮ ನಿರೂಪಿಸಿದರು.  (ಎಸ್.ಎಚ್)

Leave a Reply

comments

Related Articles

error: