ಮೈಸೂರು

ಜೆಎಸ್‍ಎಸ್ ಕಾಲೇಜಿನಲ್ಲಿ 69 ನೇ ಗಣರಾಜ್ಯೋತ್ಸವ ಆಚರಣೆ

ಮೈಸೂರು,26:- ಮೈಸೂರು ನಗರದ  ಬಿ.ಎನ್. ರಸ್ತೆಯಲ್ಲಿರುವ ಜೆಎಸ್‍ಎಸ್ ಕಾಲೇಜಿನಲ್ಲಿ 69 ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾಲೇಜು ಸಮುಚ್ಛಯದ ಮುಖ್ಯ ಕಾರ್ಯನಿರ್ವಾಹಕ  ಪ್ರೊ. ಬಿ.ವಿ. ಸಾಂಬಶಿವಯ್ಯರವರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ  ಪ್ರೊ. ಸಿ.ಕೆ.ಎನ್. ರಾಜ ಮಾತನಾಡಿ ನಮ್ಮ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗಳ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾಗಿ ತಿಳಿಸಿದರು. “ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಹಾಡಿನ ಹಿನ್ನೆಲೆಯನ್ನು ಅರಿತುಕೊಳ್ಳಬೇಕು. ಭಾರತದ ಅಭಿವೃದ್ಧಿ ಮತ್ತು ಐಕ್ಯತೆಯ ಪ್ರತೀಕವಾಗಿ ಅವುಗಳು ನಮ್ಮ ಮುಂದಿವೆ. ಶಿಸ್ತುಬದ್ಧ ಬದುಕನ್ನು  ನಡೆಸುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ರಾಷ್ಟ್ರೀಯ ಹಬ್ಬಗಳ ಇಂತಹ ಆಚರಣೆಗೆ ನಿಜವಾದ ಅರ್ಥ ಬರುತ್ತದೆ” ಎಂದರು. ಜಗದ್ಗುರು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರೊಂದಿಗಿನ ಅವರ ಒಡನಾಟವನ್ನು ಈ ಸಮಯದಲ್ಲಿ ಸ್ಮರಿಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಮಹದೇವಪ್ಪ ಸ್ವಾಗತಿಸಿದರು, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಸೋಮಶೇಖರ ವಂದಿಸಿದರು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಸಂಚಾಲಕರಾದ ಲೆಫ್ಟಿನೆಂಟ್. ಎಲ್. ವಿನಯ್ ಕುಮಾರ್‍ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್‍ಸಿಸಿ ಕೆಡೆಟ್‍ಗಳು ಆಕರ್ಷಕ ಪಥ ಸಂಚಲನ ನಡೆಸಿಕೊಟ್ಟರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: