ಕರ್ನಾಟಕ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೀದರ್,ಜ.29: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕತ್ತು ಕುಯ್ದು  ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾನಾಪುರ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಭಾಲ್ಕಿ ತಾಲೂಕಿ ಕೋಸಮ್ ಗ್ರಾಮದ ಪೂಜಾ(20) ಕೊಲೆಯಾಗಿದ್ದು, ಈಕೆ ಅಕ್ಕಮಹಾದೇವಿ ಕಾಲೇಜಿನಲ್ಲಿ ಬಿಎ ಎರಡನೇಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಹತ್ಯೆ ಆರೋಪಿ ಸಂಶುದ್ದೀನ್‍(24) ಪೊಲೀಸರು ಬಂಧಿಸಿದ್ದಾರೆ.  ಪೂಜಾಳನ್ನು ಸಂಶುದ್ದೀನ್ ಎರಡು ವರ್ಷದಿಂದ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಪ್ರೀತಿ ನಿರಾಕರಿಸಿದ್ದಕ್ಕೆ ಒತ್ತಾಯಪೂರ್ವಕವಾಗಿ ಕರೆದೊಯ್ದು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎನ್ನಲಾಗ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ದನ್ನೂರಾ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ. ( ವರದಿ: ಪಿ. ಎಸ್)

Leave a Reply

comments

Related Articles

error: